HomeLatest Newsಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಶೇ. 5 ರಷ್ಟು ಹೆಚ್ಚಳ ಮಾಡಿದ ಶಿಕ್ಷಣ ಇಲಾಖೆ: ಪೋಷಕರ ಆಕ್ರೋಶ

ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಶೇ. 5 ರಷ್ಟು ಹೆಚ್ಚಳ ಮಾಡಿದ ಶಿಕ್ಷಣ ಇಲಾಖೆ: ಪೋಷಕರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕವನ್ನು ಶಿಕ್ಷಣ ಇಲಾಖೆ ಶೇಕಡ 5ರಷ್ಟು ಹೆಚ್ಚಳ ಮಾಡಿದೆ. ಇದಕ್ಕೆ ಪೋಷಕರಿಂದ ವಿರೋಧ ವ್ಯಕ್ತವಾಗಿದೆ.

ಹೌದು, ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗಿದೆ. ಪ್ರಸ್ತುತ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 676 ರೂಪಾಯಿ ಇದೆ. 2025 -26ನೇ ಸಾಲಿನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 710 ರೂಪಾಯಿಗೆ ಏರಿಕೆ ಮಾಡಲಾಗಿದೆ. ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರು ಪರೀಕ್ಷೆಗಳನ್ನು ನಡೆಸಿ ಇದೀಗ ಪರೀಕ್ಷಾ ಶುಲ್ಕವನ್ನು ಇಲಾಖೆ ಹೆಚ್ಚಳ ಮಾಡಿದೆ. ಪರೀಕ್ಷಾ ಶುಲ್ಕ ಹೆಚ್ಚಳದಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಎಸ್ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಏರಿಕೆಗೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular