ಬೆಂಗಳೂರು: ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿದ ಎಲ್ಲಾ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಭಯ ನಿವಾರಿಸಿ ಆತ್ಮಸ್ಥೈರ್ಯ ತುಂಬಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಹಾಯವಾಣಿ ಆರಂಭಿಸಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಸಮಸ್ಯೆ ಹಾಗೂ ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಲು ದೂರವಾಣಿ ಸಂಖ್ಯೆ 080 23310075, 23310076 ಸಂಪರ್ಕಿಸಬಹುದಾಗಿದೆ. ಮಾರ್ಚ್ 5 ರಿಂದ 15 ರವರೆಗೆ ಪ್ರತಿದಿನ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ಭಾನುವಾರ ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ.

