ʻSSLCʼ ಪರೀಕ್ಷೆ : ಖಾಸಗಿ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ ಈ ಬಾರಿ ಪ್ರತ್ಯೇಕ ಪರೀಕ್ಷಾ ಕೇಂದ್ರಗಳು ಮತ್ತು ಪ್ರತ್ಯೇಕ ಪ್ರಶ್ನೆ ಪತ್ರಿಕೆ ಇರುವುದಿಲ್ಲ ಎಂದು ತಿಳಿಸಿದೆ.

ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಕ್ರಮಕ್ಕೆ ಮುಂದಾಗಿದ್ದು, ಖಾಸಗಿ ಅಭ್ಯರ್ಥಿಗಳಿಗೂ ಇತರೆ ವಿದ್ಯಾರ್ಥಿಗಳಿಗೆ ಸಿದ್ದಪಡಿಸುವ ಪ್ರಶ್ನೆಪತ್ರಿಕೆಯನ್ನೇ ನೀಡಲು ನಿರ್ಧರಿಸಿದೆ.

ಹೊಸಬರು, ಪುನರಾವರ್ತಿತರು ಸೇರಿ ಪ್ರತಿವರ್ಷ ಸುಮಾರು 40 ಸಾವಿರ ಖಾಸಗಿ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳುತ್ತಾರೆ. 2023ರ ಪರೀಕ್ಷೆಯಲ್ಲಿ ಖಾಸಗಿ ಅಭ್ಯರ್ಥಿಗಳಿಗೆ ಮೀಸಲಾದ ಪರೀಕ್ಷಾ ಕೇಂದ್ರಗಳಲ್ಲಿ ಭಾರಿ ಪ್ರಮಾಣದಲ್ಲಿ ನಕಲು ನಡೆದ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಏಕ ರೀತಿಯ ವ್ಯವಸ್ಥೆ ಮಾಡಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧಾರ ಕೈಗೊಂಡಿದೆ. ಈ ಬಾರಿ ಖಾಸಗಿಯಾಗಿ ಎಸ್ಎಸ್ಎಲ್ಸಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪ್ರಶ್ನೆ ಪತ್ರಿಕೆ, ಪರೀಕ್ಷಾ ಕೇಂದ್ರ ಇರುವುದಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read