HomeLatest Newsಇನ್ನು ಸಿಬಿಎಸ್ಇ ಮಾದರಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ: 33 ಅಂಕ ಪಡೆದರೂ ಪಾಸ್

ಇನ್ನು ಸಿಬಿಎಸ್ಇ ಮಾದರಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ: 33 ಅಂಕ ಪಡೆದರೂ ಪಾಸ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಿಬಿಎಸ್ಇ ಮಾದರಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಸ್ತಾಪನೆ ಸಲ್ಲಿಸಿದೆ.

ಕನಿಷ್ಠ 33 ಅಂಕ ಪಡೆದವರನ್ನೂ ತೇರ್ಗಡೆ ಮಾಡಲಾಗುವುದು. ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮಕ್ಕಳು ಇನ್ನು ಮುಂದೆ ಸಿಬಿಎಸ್ಇ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ.

ಸಿಬಿಎಸ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕ ಸೇರಿ ಒಟ್ಟು ಶೇಕಡ 33 ಅಂಕ ಪಡೆದರೂ ಪಾಸ್ ಆಗುತ್ತಾರೆ. ಪ್ರತಿ ವಿಷಯಕ್ಕೆ 20 ಆಂತರಿಕ ಅಂಕಗಳು ನಿಗದಿಪಡಿಸಿದ್ದು, 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಎರಡೂ ಸೇರಿ 100 ಅಂಕಗಳಿಗೆ ಕನಿಷ್ಠ 33 ಅಂಕ ಪಡೆದವರು ಪಾಸ್ ಆಗುತ್ತಾರೆ. ಇದೇ ಮಾದರಿಯನ್ನು ರಾಜ್ಯ ಪಠ್ಯಕ್ರಮದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಿರುವ ಎಸ್ಎಸ್ಎಲ್ಸಿ ಪರೀಕ್ಷಾ ನಿಯಮದ ಪ್ರಕಾರ ಒಬ್ಬ ವಿದ್ಯಾರ್ಥಿ ಪಾಸಾಗಲು ಶೇಕಡ 35 ರಷ್ಟು ಅಂಕ ಪಡೆಯಬೇಕಿದೆ. ಸಿಬಿಎಸ್ಇ ಮಾದರಿ ಅಳವಡಿಸಿಕೊಂಡರೆ 33 ಅಂಕ ಪಡೆದರೂ ಪಾಸ್ ಆಗುತ್ತಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಯನ್ನು 125 ಅಂಕಗಳಿಗೆ ನಡೆಸಲಾಗುವುದು. ಪ್ರಥಮ ಭಾಷೆಗೆ 25 ಆಂತರಿಕ ಅಂಕ ಇದೆ. ವಿಜ್ಞಾನ, ಸಮಾಜ ವಿಜ್ಞಾನ, ಗಣಿತ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ 100 ಅಂಕಗಳಿಗೆ ಪರೀಕ್ಷೆ ನಡೆಸಲಾಗುವುದು. 20 ಅಂಕಗಳು ಆಂತರಿಕ ಮೌಲ್ಯಮಾಪನಕ್ಕೆ ನಿಗದಿಯಾಗಿವೆ.

ಸಿಬಿಎಸ್ಇ ಮಾದರಿ ಹೊಸ ನಿಯಮ ಜಾರಿಯಾದಲ್ಲಿ ವಿದ್ಯಾರ್ಥಿ ಒಂದು ವಿಷಯದಲ್ಲಿ 20 ಆಂತರಿಕ ಅಂಕ ಪಡೆದಲ್ಲಿ ಲಿಖಿತ ಪರೀಕ್ಷೆಯಲ್ಲಿ 13 ಅಂಕ ಬಂದರೂ ಪಾಸ್ ಆಗುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular