HomeKarnatakaSSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ: ಸ್ಪಷ್ಟನೆ

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ: ಸ್ಪಷ್ಟನೆ

ಬೆಂಗಳೂರು: 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸಲಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular