HomeKarnatakaಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ ಎರಡನೇ ವಾರ ಫಲಿತಾಂಶ ಪ್ರಕಟ

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ ಎರಡನೇ ವಾರ ಫಲಿತಾಂಶ ಪ್ರಕಟ

ಬೆಂಗಳೂರು: 2022 -23 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಮೇ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ.

ಏಪ್ರಿಲ್ 24 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಆರ್. ರಾಮಚಂದ್ರನ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನೀಡಿದ ಮಾದರಿಯಲ್ಲೇ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟಿಸಲಾಗುತ್ತದೆ. ಮೌಲ್ಯಮಾಪನ ಕಾರ್ಯಕ್ಕೆ ಗೈರುಹಾಜರಾಗದೆ ಕಡ್ಡಾಯವಾಗಿ ಎಲ್ಲರೂ ಹಾಜರಾಗುವಂತೆ ಮೌಲ್ಯಮಾಪಕರಿಗೆ ತಿಳಿಸಲಾಗಿದೆ. ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಕ್ರಿಯೆಗೆ ತೊಂದರೆಯಾಗದಂತೆ ಮೇ ಎರಡನೇ ವಾರ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular