ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ SSLC ವಾರ್ಷಿಕ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ತಾವು ಓದಿದ ಶಾಲೆ ಹೊರತಾಗಿ ಬೇರೆ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಿರುವುದರಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್ಆರ್ಟಿಸಿ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ನಿಗಮದ ಎಲ್ಲಾ ಚಾಲಕರು, ನಿರ್ವಾಹಕರು ಇದನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ಬರೆಯುವ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಿದೆ. ಇದಲ್ಲದೆ ಅವಶ್ಯಕತೆ ಇರುವೆಡೆ ವಿದ್ಯಾರ್ಥಿಗಳ ಕೋರಿಕೆ ಸ್ಥಳದಲ್ಲಿ ನಿಲುಗಡೆಗೆ ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read