SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1 ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆ/ ಪ್ರೌಢಶಾಲೆ ವಿಭಾಗಗಳನ್ನು ಹೊಂದಿರುವ ಕಾಲೇಜುಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತೆಗೆದುಕೊಳ್ಳುವ ಎಲ್ಲಾ ಮಾದರಿಯ ವಿದ್ಯಾರ್ಥಿಗಳ ವಿವರಗಳನ್ನು ಮಂಡಳಿಯ http://kseab.Karnataka.gov.in ವೆಬ್ಸೈಟ್ನಲ್ಲಿ ಶಾಲಾ ಲಾಗಿನ್ ಮೂಲಕ ಅಪ್ಲೋಡ್ ಮಾಡಬೇಕು.

ಪರೀಕ್ಷಾ ನೋಂದಣಿಗಾಗಿ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ಅಕ್ಟೋಬರ್ 18 ರಿಂದ ನವೆಂಬರ್ 11ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read