HomeKarnatakaಸೆ. 24 ರಿಂದ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ - 1 ಪರೀಕ್ಷೆ ವೇಳಾಪಟ್ಟಿ ಪ್ರಕಟ

ಸೆ. 24 ರಿಂದ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ – 1 ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2024 -25 ನೇ ಸಾಲಿನ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ -1 ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1ರವರೆಗೆ ಪರೀಕ್ಷೆ ನಡೆಸಲಾಗುವುದು.

ವೇಳಾಪಟ್ಟಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪ್ರಥಮ ಭಾಷೆ –ಕನ್ನಡ, ಹಿಂದಿ, ಇಂಗ್ಲಿಷ್

ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ದ್ವಿತೀಯ ಭಾಷೆ –ಇಂಗ್ಲಿಷ್, ಹಿಂದಿ, ಮಧ್ಯಾಹ್ನ ತೃತೀಯ ಭಾಷೆ –ಹಿಂದಿ, ಕನ್ನಡ, ಇಂಗ್ಲಿಷ್ ಪರೀಕ್ಷೆಗಳು ನಡೆಯಲಿವೆ.

ಸೆಪ್ಟೆಂಬರ್ 26ರಂದು ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಎನ್.ಎಸ್.ಕ್ಯೂ.ಎಫ್. ವಿಷಯಗಳು ಪರೀಕ್ಷೆ ನಡೆಯಲಿವೆ.

ಸೆಪ್ಟಂಬರ್ 27ರಂದು ಕೋರ್ ವಿಷಯಗಳಾದ ಗಣಿತ, ಸಮಾಜಶಾಸ್ತ್ರ, ವಿಜ್ಞಾನ,

ಸೆಪ್ಟೆಂಬರ್ 28 ರಂದು ರಾಜ್ಯಶಾಸ್ತ್ರ, ಹಿಂದುಸ್ಥಾನಿ ಸಂಗೀತ

ಸೆಪ್ಟೆಂಬರ್ 30ರಂದು ಸಮಾಜ ವಿಜ್ಞಾನ

ಅಕ್ಟೋಬರ್ 1 ರಂದು ಜೆಟಿಎಸ್ ವಿಷಯಗಳ ಪರೀಕ್ಷೆ ನಡೆಸಲಾಗುವುದು.

ಈಗಾಗಲೇ ಎಲ್ಲಾ ವಿಷಯಗಳಿಗೆ ಮಂಡಳಿಯ ಹಂತದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಸಾಫ್ಟ್ ಕಾಪಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಲುಪಿಸಲಾಗಿದೆ. ಈ ಪರೀಕ್ಷೆಯನ್ನು ಆಯಾ ಶಾಲಾ ಹಂತದಲ್ಲಿ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಪರೀಕ್ಷೆಯ ಪ್ರಾರಂಭದಲ್ಲಿ ಪ್ರತಿ ವಿಷಯದ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡುವುದು. ಜೆಟಿಎಸ್ ವಿಷಯಗಳ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಯಲ್ಲಿ ಅಕ್ಟೋಬರ್ 1ರ ಮಧ್ಯಾಹ್ನ 2 ಗಂಟೆಯಿಂದ ಆಯಾ ಶಾಲಾ ಹಂತದಲ್ಲಿ ನಡೆಸುವುದು.

ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತದ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2ರಿಂದ 3.45ರವರೆಗೆ, ಪ್ರಾಯೋಗಿಕ ಪರೀಕ್ಷೆಯನ್ನು 3.45 ರಿಂದ ಸಂಜೆ 5:15 ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular