HomeKarnatakaಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಕ್ರಮ: ನಾಲ್ವರು ಶಿಕ್ಷಕರು ಅಮಾನತು, ಓರ್ವ ವಿದ್ಯಾರ್ಥಿ ಡಿಬಾರ್

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಕ್ರಮ: ನಾಲ್ವರು ಶಿಕ್ಷಕರು ಅಮಾನತು, ಓರ್ವ ವಿದ್ಯಾರ್ಥಿ ಡಿಬಾರ್

ಬೆಂಗಳೂರು: ರಾಜ್ಯಾದ್ಯಂತ ಶನಿವಾರ ಎಸ್ಎಸ್ಎಲ್ಸಿ ವಿಜ್ಞಾನ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಒಬ್ಬ ವಿದ್ಯಾರ್ಥಿ ಡಿಬಾರ್ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯಲೋಪ ಎಸಗಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಆದರ್ಶ ವಿದ್ಯಾಲಯ ಕೇಂದ್ರದಲ್ಲಿ ವಿಜ್ಞಾನ ವಿಷಯ ಪರೀಕ್ಷೆ ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಪರೀಕ್ಷಾ ಅಕ್ರಮಕ್ಕೆ ಸಹಕರಿಸಿದ ಆರೋಪದ ಮೇಲೆ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಪರೀಕ್ಷೆಗೆ ನೋಂದಾಯಿಸಿದ್ದ 8.56 ಲಕ್ಷ ವಿದ್ಯಾರ್ಥಿಗಳಲ್ಲಿ 8.41 ಲಕ್ಷ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಪರೀಕ್ಷೆಗೆ ಹಾಜರಾಗಿದ್ದಾರೆ. 15,311 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular