BIG NEWS : ಮಾ.21 ರಿಂದ ರಾಜ್ಯಾದ್ಯಂತ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭವಾಗಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ.

ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಓಆರ್ಎಸ್, ಪ್ರಥಮ ಚಿಕಿತ್ಸೆ ಕಿಟ್ ಇರಿಸಿಕೊಳ್ಳಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿ ಮತ್ತು ಜಾಗೃತ ದಳ ಅಧಿಕಾರಿಗಳನ್ನು ಹೊರತುಪಡಿಸಿ ಇನ್ನಾವ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ ಪ್ರವೇಶ ಇರುವುದಿಲ್ಲ.

ಕಳೆದ ವರ್ಷದಿಂದ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವೆಬ್ಕಾಸ್ಟಿಂಗ್ನಲ್ಲಿ 3 ಹಂತದಲ್ಲಿ ವೀಕ್ಷಣೆ ಮಾಡಲಾಗುತ್ತದೆ. ಈ ಬಾರಿ ಕೃತಕ ತಂತ್ರಜ್ಞಾನ ಬಳಸಿ ಫೇಸ್ ಡಿಟೆಕ್ಷನ್ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೊಠಡಿಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು.

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಥವಾ ಪರೀಕ್ಷೆ ಮುಂದೂಡಲಾಗಿದೆ ಎಂಬಂತಹ ಯಾವುದೇ ರೀತಿಯ ವದಂತಿಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಬದಲಿಗೆ ಪರೀಕ್ಷೆಗೆ ಸಜ್ಜಾಗಿರಬೇಕು. ಪೋಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಪರೀಕ್ಷೆ ಹಿಂದಿನ ದಿನ ಅಥವಾ ಬೆಳಿಗ್ಗೆ ಆಯಾಸವಾಗುವಂತಹ ಯಾವುದೇ ಕಾರ್ಯ ಮಾಡದೇ, ಪೌಷ್ಟಿಕವಾದ ಆಹಾರ ಸೇವಿಸಿ ಪರೀಕ್ಷೆಗೆ ಹಾಜರಾಗಬೇಕು. ನಿರ್ಭೀತಿಯಿಂದ ಪರೀಕ್ಷೆಯನ್ನು ಎದುರಿಸಬೇಕು. ಖಂಡಿತವಾಗಿ ಉತ್ತಮವಾಗಿ ಪರೀಕ್ಷೆ ಬರೆದು, ಉತ್ತಮ ಅಂಕ ಗಳಿಸುತ್ತೀರಿ.

ಪರೀಕ್ಷಾ ಕೇಂದ್ರದೊಳಗೆ ಈ ನಿಯಮ ಪಾಲನೆ ಕಡ್ಡಾಯ

1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

7) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಸಿಸಿ ಕ್ಯಾಮೆರಾ ಕಡ್ಡಾಯ : ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಯಾವ ಕೇಂದ್ರದಲ್ಲಿ ಇಲ್ಲವೋ ಮಾಹಿತಿ ನೀಡಿ ಈಗಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಈ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು .

ಉಚಿತ ಬಸ್ ಪಾಸ್: ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read