HomeKarnatakaಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್​​.ಎಸ್.​ಎಲ್.​ಸಿ ವಾರ್ಷಿಕ ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​​​​​ಆರ್​​​ಟಿಸಿ ಬಸ್ ಗುಡ್ ನ್ಯೂಸ್ ನೀಡಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.​​ಎಸ್​.​ಎಲ್.​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆ.ಎಸ್.​ಆರ್.​​ಟಿ.ಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್​ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ.

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮಾರ್ಚ್ 18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular