HomeJobsSSLC, ITI ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ; ವಿದ್ಯುತ್ ಇಲಾಖೆಯಲ್ಲಿ 110 ಹುದ್ದೆಗಳಿಗೆ ಅರ್ಜಿ...

SSLC, ITI ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ; ವಿದ್ಯುತ್ ಇಲಾಖೆಯಲ್ಲಿ 110 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶವೊಂದು ಒದಗಿದೆ. ಕೇಂದ್ರ ವಿದ್ಯುತ್ ಸಚಿವಾಲಯದ ಅಧೀನದಲ್ಲಿರುವ ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (CPRI) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 110 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, ITI, ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಕ್ಟೋಬರ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕೇಂದ್ರ ವಿದ್ಯುತ್ ಸಚಿವಾಲಯದ ಅಧೀನದಲ್ಲಿರುವ ಸ್ವಾಯತ್ತ ಸಂಸ್ಥೆಯಾದ ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (CPRI) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 110

1. ಎಂಜಿನಿಯರಿಂಗ್ ಆಫೀಸರ್ ಗ್ರೇಡ್-1 (ಎಲೆಕ್ಟ್ರಿಕಲ್/ಸಿವಿಲ್)

ಹುದ್ದೆಗಳ ಸಂಖ್ಯೆ: 8

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಅಥವಾ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆಯ ಬ್ಯಾಚುಲರ್ ಪದವಿ ಪಡೆದಿರಬೇಕು. 2024, 2025 ಅಥವಾ 2026ರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಮಾನ್ಯ GATE ಸ್ಕೋರ್ ಹೊಂದಿರಬೇಕು.

ವಯೋಮಿತಿ: ಗರಿಷ್ಠ 30 ವರ್ಷ

ಆಯ್ಕೆ ವಿಧಾನ: GATE ಸ್ಕೋರ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ.

2. ಎಂಜಿನಿಯರಿಂಗ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್/ಮೆಕ್ಯಾನಿಕಲ್)

ಹುದ್ದೆಗಳ ಸಂಖ್ಯೆ: 11

ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪ್ರಥಮ ದರ್ಜೆಯ ಮೂರು ವರ್ಷದ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಕನಿಷ್ಠ 5 ವರ್ಷಗಳ ಕೆಲಸದ ಅನುಭವ ಕಡ್ಡಾಯ.

ವಯೋಮಿತಿ: ಗರಿಷ್ಠ 35 ವರ್ಷ

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮತ್ತು ಸ್ಕಿಲ್ ಟೆಸ್ಟ್.

3. ಸೈಂಟಿಫಿಕ್ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ: 2

ವಿದ್ಯಾರ್ಹತೆ: ಕೆಮಿಸ್ಟ್ರಿ ವಿಷಯದಲ್ಲಿ ಪ್ರಥಮ ದರ್ಜೆಯ ಬ್ಯಾಚುಲರ್ ಪದವಿ ಹೊಂದಿರಬೇಕು. ಕನಿಷ್ಠ 5 ವರ್ಷಗಳ ಕೆಲಸದ ಅನುಭವ ಕಡ್ಡಾಯ.

ವಯೋಮಿತಿ: ಗರಿಷ್ಠ 35 ವರ್ಷ

4. ಟೆಕ್ನಿಷಿಯನ್ ಗ್ರೇಡ್-1 (ಎಲೆಕ್ಟ್ರಿಕಲ್/ಮೆಕ್ಯಾನಿಕಲ್)

ಹುದ್ದೆಗಳ ಸಂಖ್ಯೆ: 2

ವಿದ್ಯಾರ್ಹತೆ: ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ವಿಭಾಗದಲ್ಲಿ ITI ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

ವಯೋಮಿತಿ: ಗರಿಷ್ಠ 28 ವರ್ಷ

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮತ್ತು ಟ್ರೇಡ್ ಟೆಸ್ಟ್.

5. ಟೆಕ್ನಿಕಲ್ ಅಟೆಂಡೆಂಟ್ ಗ್ರೇಡ್-1

ಹುದ್ದೆಗಳ ಸಂಖ್ಯೆ: 37

ವಿದ್ಯಾರ್ಹತೆ: ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ವಿಭಾಗದಲ್ಲಿ ITI ಸರ್ಟಿಫಿಕೇಟ್ ಹೊಂದಿರಬೇಕು.

ವಯೋಮಿತಿ: ಗರಿಷ್ಠ 30 ವರ್ಷ

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT).

6. ಅಸಿಸ್ಟೆಂಟ್ ಗ್ರೇಡ್-II

ಹುದ್ದೆಗಳ ಸಂಖ್ಯೆ: 29

ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲಿ BA/B.Sc/B.Com/BBA/BBM/BCA ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಬೇಸಿಕ್ ಕಂಪ್ಯೂಟರ್ ಕೋರ್ಸ್ (BCC) ಸರ್ಟಿಫಿಕೇಟ್ ಹೊಂದಿರಬೇಕು.

ವಯೋಮಿತಿ: ಗರಿಷ್ಠ 30 ವರ್ಷ

7. ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಗ್ರೇಡ್-1 (ವಾಚ್ ಅಂಡ್ ವಾರ್ಡ್ ಡ್ಯೂಟೀಸ್)

ಹುದ್ದೆಗಳ ಸಂಖ್ಯೆ: 14

ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಗರಿಷ್ಠ 25 ವರ್ಷ

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮತ್ತು ಟ್ರೇಡ್/ಪ್ರೊಫಿಷಿಯನ್ಸಿ ಟೆಸ್ಟ್.

ಅರ್ಜಿ ಸಲ್ಲಿಕೆ ವಿವರ

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಅರ್ಜಿ ಆರಂಭ: ಸೆಪ್ಟೆಂಬರ್ 19

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 12

ಅರ್ಜಿ ಶುಲ್ಕ

SC, ST, PwBD, ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

  • ಎಂಜಿನಿಯರಿಂಗ್ ಆಫೀಸರ್ ಗ್ರೇಡ್-1, ಎಂಜಿನಿಯರಿಂಗ್ ಅಸಿಸ್ಟೆಂಟ್, ಸೈಂಟಿಫಿಕ್ ಅಸಿಸ್ಟೆಂಟ್: ₹1,000

  • ಟೆಕ್ನಿಷಿಯನ್ ಗ್ರೇಡ್-1, ಅಸಿಸ್ಟೆಂಟ್ ಗ್ರೇಡ್-II, ಟೆಕ್ನಿಕಲ್ ಅಟೆಂಡೆಂಟ್ ಗ್ರೇಡ್-1: ಇತರೆ ಅಭ್ಯರ್ಥಿಗಳಿಗೆ ₹700

ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿಗಾಗಿ CPRIಯ ಅಧಿಕೃತ ವೆಬ್‌ಸೈಟ್ cpri.res.inಗೆ ಭೇಟಿ ನೀಡಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular