ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ

ಬೆಂಗಳೂರು: ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು.

2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡಿ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅತಿ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಹಾಗೂ ಸಮಾನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು.

ಈ ಯೋಜನೆಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪರಿಶೀಲಿಸಿ ತಿದ್ದುಪಡಿ / ಸೇರ್ಪಡೆ ವಿವರ ಗಳನ್ನು ಇ-ಮೇಲ್ ಮುಖಾಂತರ ಹಾಗೂ ಮುದ್ರಿತ ಪ್ರತಿಯನ್ನು ಮಂಡಲಿಗೆ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read