HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ SSLC ಅಂಕಪಟ್ಟಿ ತಿದ್ದುಪಡಿಗೆ ಅವಕಾಶ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ SSLC ಅಂಕಪಟ್ಟಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಆನ್ಲೈನ್ ನಲ್ಲೇ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ ಇತರೆ ತಪ್ಪುಗಳಿದ್ದಲ್ಲಿ ಆನ್ಲೈನ್ ನಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅನೇಕ ಸೇವೆಗಳನ್ನು ಡಿಜಿಟಲೀಕರಣ ಮಾಡಿದ್ದು, ಅಂಕಪಟ್ಟಿ ಡಿ ಆನ್ಲೈನ್ ಮೂಲಕ ಅಂಕಪಟ್ಟಿ ತಿದ್ದುಪಡಿ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಯು ಓದಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಪೂರಕ ದಾಖಲೆ ಸಲ್ಲಿಸಬೇಕು. ಮುಖ್ಯ ಶಿಕ್ಷಕರು ಮಂಡಳಿಯ ವೆಬ್ಸೈಟ್ ಮೂಲಕ ಶಾಲಾ ಲಾಗಿನ್ ನಲ್ಲಿ ಪ್ರಸ್ತಾವನೆ ಸಲ್ಲಿಸಬಹುದು. ಮುಂದಿನ ಒಂದು ತಿಂಗಳ ಅವಧಿಗೆ ಮಾತ್ರ ಭೌತಿಕ ಅರ್ಜಿ ಸ್ವೀಕರಿಸಲಿದ್ದು, ನಂತರ ಆನ್ಲೈನ್ ಮೂಲಕವೇ ಅರ್ಜಿ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular