HomeKarnatakaBREAKING NEWS: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೇಲುಗೈ; ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ;...

BREAKING NEWS: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೇಲುಗೈ; ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ; ಯಾದಗಿರಿ ಲಾಸ್ಟ್

ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.

ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿತ್ತು. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್ ಸೈಟ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

karresults.nic.in ಅಥವಾ kseab.karnataka.gov.in ನಲ್ಲಿ ವೀಕ್ಷಿಸಬಹುದು.

ಪಾಸ್ ಆದವರೂ ಅಂಕ ಹೆಚ್ಚಿಸಿಕೊಳ್ಳಲು 2ನೇ ಬಾರಿ ಹಗೂ 3ನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಶೇ.94ರಷ್ಟು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 2ನೇ ಸ್ಥಾನ ಶೇ.92.12ರಷ್ಟು ಫಲಿತಾಂಶ ಬಂದಿದೆ, ಶಿವಮೊಗ್ಗ ಜಿಲ್ಲೆ 3ನೇ ಸ್ಥಾದಲ್ಲಿದ್ದು, ಶೇ.88.67ರಷ್ಟು ಫಲಿತಾಂಶ ಬಂದಿದೆ. ಕೊಡಗು ನಾಲ್ಕನೇ ಸ್ಥಾನ ಶೇ.88.67, ಉತ್ತರ ಕನ್ನಡ 5ನೇ ಸ್ಥಾನ ಶೇ. 86.54, ಹಾಸನ ಶೇ. 86.28, ಮೈಸೂರು 85.5, ಶಿರಸಿ ಶೇ. 84.64 ಹಾಗೂ ಯಾದಗಿರಿ ಜಿಲ್ಲೆ ಕೊನೇ ಸ್ಥಾನ ಪಡೆದಿದೆ. ಯಾದಗಿರಿಯಲ್ಲಿ ಶೇ.50.59ರಷ್ಟು ಫಲಿತಾಂಶ ಬದಿದೆ.

For Latest News Updates, Join Our Whatsapp Community🚩
RELATED ARTICLES

Most Popular