ಬೆಂಗಳೂರು: ಹಿಂದಿ ಸೇರಿದಂತೆ ಎಸ್ಎಸ್ಎಲ್ಸಿ ತೃತೀಯ ಭಾಷೆಗೆ ಅಂಕ ನೀಡಬೇಕೆ ಅಥವಾ ಗ್ರೇಡ್ ನೀಡಬೇಕೆ ಎನ್ನುವ ಕುರಿತು ಶಾಲಾ ಶಿಕ್ಷಣ ಇಲಾಖೆ ಏಪ್ರಿಲ್ 21ರ ಮಂಗಳವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದು, ಫಲಿತಾಂಶದ ದಿನಾಂಕವನ್ನು ಕೂಡ ಪ್ರಕಟಿಸುವ ಸಾಧ್ಯತೆ ಇದೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳನ್ನು ಹಿಂದಿನ ವರ್ಷಗಳಂತೆ ಮೌಲ್ಯಮಾಪನ ಮಾಡಬೇಕು. ಅಂಕ ನೀಡಬೇಕು ಎಂದು ಹೈಕೋರ್ಟ್ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ ಎಂದು ಮರುಪರೀಕ್ಷೆ ಅರ್ಜಿಯ ವಿಚಾರಣೆ ನಡೆಯಲಿದ್ದು, ನ್ಯಾಯಾಲಯದ ನಿರ್ದೇಶನ ಪರಿಗಣಿಸಿ ಶಾಲಾ ಶಿಕ್ಷಣ ಇಲಾಖೆ ಜೊತೆಗೆ ಫಲಿತಾಂಶದ ದಿನಾಂಕವನ್ನು ಕೂಡ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 2026ರ ಪರೀಕ್ಷೆಯಿಂದಲೇ ಅನ್ವಯವಾಗುವಂತೆ ಮೂರನೇ ಭಾಷಾ ವಿಷಯಗಳಿಗೆ ಅಂಕ ನೀಡುವ ಪದ್ಧತಿ ಬದಲಿಗೆ ಗ್ರೇಡ್ ನಮೂದಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿತ್ತು.
ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲವರು ಹೈಕೋರ್ಟ್ ನಲ್ಲಿ ಪಿಎಎಲ್ ಸಲ್ಲಿಸಿದ್ದು, 2025ರ ಪರೀಕ್ಷೆ ವೇಳೆ ಜಾರಿಯಲ್ಲಿದ್ದ ನಿಯಮವನ್ನು ಅನುಸರಿಸಲು ಹೈಕೋರ್ಟ್ ಸೂಚಿಸಿದೆ. ಇದುವರೆಗೆ ಎಸ್ಎಸ್ಎಲ್ಸಿ ಮಕ್ಕಳು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ತೃತೀಯ ಭಾಷೆ ಹೊರತುಪಡಿಸಿ ಉಳಿದ ವಿಷಯಗಳ ಗರಿಷ್ಠ 525 ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ತೃತೀಯ ಭಾಷೆಗೆ ಎ, ಬಿ, ಸಿ, ಎಂದು ಗ್ರೇಡ್ ನಮೂದಿಸಲಾಗುವುದು. 525 ಅಂಕಗಳನ್ನು ಮಾತ್ರ ಪರಿಗಣಿಸಿ ಶೇಕಡವಾರು ಅಂಕ ನೀಡಲಾಗುವುದು ಎಂದು ಹೇಳಲಾಗಿದೆ. ಇಂದು ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ನಿರ್ದೇಶನದಂತೆ ಶಿಕ್ಷಣ ಇಲಾಖೆ ಕ್ರಮಕೈಗೊಳ್ಳಲಿದೆ.

