SSLC ಯಲ್ಲಿ ಶೂನ್ಯ ಸಾಧನೆ ಶಾಲಾ ಶಿಕ್ಷಕರಿಗೆ ಸನ್ಮಾನ: ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಧಾರವಾಡ: ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಮಾರ್ಚ್ 31 ರೊಳಗೆ ಪೂರ್ಣ ಬಳಕೆ ಆಗದೆ, ಲ್ಯಾಪ್ಸ್ ಆದರೆ ಸಂಬಂಧಿಸಿದ ಇಲಾಖೆ ಅಧಿಕಾರಿಯನ್ನು ಜವಾಬ್ದಾರರನ್ನಾಗಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವದಾಗಿ ಕಾರ್ಮಿಕ ಇಲಾಖೆ ಮತ್ತು ಧಾರವಾಡ ಜಿಲ್ಲೆ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಅವರು ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನ ಡಿಸೆಂಬರ್-2024 ರ ಅಂತ್ಯಕ್ಕೆ ಕೊನೆಗೊಂಡ 3ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಸೊನ್ನೆ ಸಾಧನೆ ಮಾಡುವ ಶಿಕ್ಷಕರಿಗೆ ಸನ್ಮಾನ:

ವಿದ್ಯಾಕಾಶಿ ಎಂಬ ಅನ್ವರ್ಥಕ ನಾಮದ ಧಾರವಾಡ ಜಿಲ್ಲೆ ಇಂದು ಮಕ್ಕಳ ಶಿಕ್ಷಣದಲ್ಲಿ ಹಿಂದುಳಿದಿದೆ. ಪ್ರಸಕ್ತ ಸಾಲಿನಲ್ಲಿ ಹೆಚ್ಚು ಸಾಧನೆ ಮಾಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ನೇತೃತ್ವದಲ್ಲಿ ಮಿಷನ್ ವಿದ್ಯಾಕಾಶಿ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ವಿಶೇಷ ತರಬೇತಿ, ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಒಂದು ಅನುದಾನಿತ ಹಾಗೂ ಎರಡು ಅನುದಾನ ರಹಿತ ಶಾಲೆಗಳಲ್ಲಿನ ಒಬ್ಬ ವಿದ್ಯಾರ್ಥಿಯೂ ಉತ್ತೀರ್ಣ ಆಗಿಲ್ಲ. ಹೀಗೆ ಶೂನ್ಯ ಸಾಧನೆ ಮಾಡಿದ ಮತ್ತು ಈ ವರ್ಷ ಶೂನ್ಯ ಸಾಧನೆ ಮಾಡುವ ಶಾಲೆಗಳ ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ, ರಾಷ್ಟ್ರೀಯ ಹಬ್ಬಗಳಲ್ಲಿ ಸನ್ಮಾನ ಮಾಡಲಾಗುತ್ತದೆ. ಇಂತವರು ಆತ್ಮಸಾಕ್ಷಿ ಕೇಳಿಕೊಂಡು ಕೆಲಸ ಮಾಡಬೇಕು. ಇಂತಹ ಶಾಲೆ, ಶಿಕ್ಷಕರನ್ನು ಮುಂದಿನ ದಿನಗಳಲ್ಲಿ ಸಹಿಸುವದಿಲ್ಲ. ಅಂತವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವದಾಗಿ ಸಚಿವ ಸಂತೋಷ ಲಾಡ್ ಸಭೆಯಲ್ಲಿ ಎಚ್ಚರಿಸಿದರು

ಎಲ್ಲ ಅಧಿಕಾರಿಗಳಿಗೆ ದಿನಚರಿ ಕಡ್ಡಾಯ:

ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕಾಲ ಕಳೆಯದೆ ಕ್ಷೇತ್ರ ಭೇಟಿ ಮೂಲಕ ಗ್ರಾಮಗಳಿಗೆ, ಕಾಮಗಾರಿ ಸ್ಥಳಗಳಿಗೆ, ಇಲಾಖೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಪ್ರತಿ ಅಧಿಕಾರಿ ದಿನನಿತ್ಯ ನಿರ್ವಹಿಸುವ ಕಚೇರಿ ಕಾರ್ಯಗಳ ಕುರಿತು ಡೈರಿ ಬರೆಯಬೇಕು. ಮುಂದಿನ ಕೆಡಿಪಿ ಸಭೆಗೆ ತಪ್ಪದೇ ತಮ್ಮ ದಿನಚರಿ(ಡೈರಿ)ಯೊಂದಿಗೆ ಬರಬೇಕೆಂದು ಸಚಿವರು ನಿರ್ದೇಶಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read