HomeKarnatakaಇಂದು ಬೆಳಿಗ್ಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ: ಇಲ್ಲಿದೆ...

ಇಂದು ಬೆಳಿಗ್ಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ: ಇಲ್ಲಿದೆ ವೆಬ್ಸೈಟ್ ವಿಳಾಸ

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಲಿದೆ.

ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 4,41,910 ವಿದ್ಯಾರ್ಥಿಗಳು, 4,28,058 ವಿದ್ಯಾರ್ಥಿನಿಯರು ಸೇರಿ 8,69,968 ವಿದ್ಯಾರ್ಥಿಗಳ ಭವಿಷ್ಯ ಪ್ರಕಟವಾಗಲಿದೆ.

ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಮೇ 9ರಂದು ಬೆಳಿಗ್ಗೆ ಫಲಿತಾಂಶ ಪ್ರಕಟಿಸಲಾಗುವುದು. ಇಂದು ಬೆಳಗ್ಗೆ 10.30 ರ ನಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in, kseeb.kar.nic.in,  ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸಕ್ತ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ -1, ಪರೀಕ್ಷೆ -2 ಮತ್ತು ಪರೀಕ್ಷೆ -3 ನಡೆಸಲಾಗುವುದು. ಇಂದು ಪರೀಕ್ಷೆ -1ರ ಫಲಿತಾಂಶ ಪ್ರಕಟಿಸಲಾಗುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular