ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಹಾಗೂ ಪೋಷಕರ ಸುದೀರ್ಘ ಕಾಯುವಿಕೆಗೆ ಇಂದು ತೆರೆ ಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಅಕ್ಷರಶಃ ದಾಖಲೆ ಪ್ರಮಾಣದ ಫಲಿತಾಂಶ ಬಂದಿದ್ದು, ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ದಾಖಲೆಯ ಅಂಕಗಳು: ಒಟ್ಟು ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಜಂಟಿ ಪ್ರಥಮ ಸ್ಥಾನ ಪಡೆದಿದ್ದಾರೆ.ಈ ಬಾರಿ ರಾಜ್ಯದಲ್ಲಿ ಶೇ. 91.6 ರಷ್ಟು ದಾಖಲೆ ಪ್ರಮಾಣದ ಫಲಿತಾಂಶ ಬಂದಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಇದು ಅತ್ಯುತ್ತಮ ಸಾಧನೆಯಾಗಿದೆ
ರಾಜ್ಯದ ಟಾಪರ್ಸ್ ಇವರೇ:
ರೂಪಾ ಚೆನ್ನಗೌಡ ಪಾಟೀಲ್ (ಬೆಳಗಾವಿ) – 625/625
ಜಾನವಿ (ಹಾಸನ) – 625/625
ಉತ್ಸವ್ ಪಾಟೀಲ್ – 625/625
ಬಾಲಕಿಯರ ಭರ್ಜರಿ ಸಾಧನೆ: ಎಂದಿನಂತೆ ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ವಿದ್ಯಾರ್ಥಿನಿಯರ ಉತ್ತೀರ್ಣ ಪ್ರಮಾಣವು ಗಮನಾರ್ಹವಾಗಿ ಹೆಚ್ಚಿದೆ.
ಮೊಬೈಲ್‌ನಲ್ಲೇ ರಿಸಲ್ಟ್: ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆದಿದ್ದ ಈ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ನೇರವಾಗಿ ಕಳುಹಿಸಲಾಗುತ್ತಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ನಲ್ಲಿ ತಮ್ಮ ನೋಂದಣಿ ಸಂಖ್ಯೆ ಬಳಸಿ ಅಂಕಪಟ್ಟಿಯನ್ನು ವೀಕ್ಷಿಸಬಹುದು. ಮಂಡಳಿಯ ಕಟ್ಟುನಿಟ್ಟಿನ ಕ್ರಮದ ನಡುವೆಯೂ ಈ ಬಾರಿ ಶೇ. 90ರಷ್ಟು ಫಲಿತಾಂಶ ಬಂದಿರುವುದು ಪೋಷಕರಲ್ಲಿ ಸಂತಸ ಮೂಡಿಸಿದೆ.

