HomeKarnatakaವಿದ್ಯಾರ್ಥಿಗಳೇ ಗಮನಿಸಿ: ಇಂದು SSLC ಪರೀಕ್ಷೆ -3 ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳೇ ಗಮನಿಸಿ: ಇಂದು SSLC ಪರೀಕ್ಷೆ -3 ಫಲಿತಾಂಶ ಪ್ರಕಟ

ಬೆಂಗಳೂರು: ಆಗಸ್ಟ್ ಮೊದಲ ವಾರ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆ -3ರ ಫಲಿತಾಂಶ ಆಗಸ್ಟ್ 26ರಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಪ್ರಕಟಿಸುವ ಬಗ್ಗೆ ಮಾಹಿತಿ ನೀಡಲಾಗಿದೆ. ಆಗಸ್ಟ್ 2ರಿಂದ 9ರವರೆಗೆ ರಾಜ್ಯಾದ್ಯಂತ 410 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ -3 ನಡೆಸಲಾಗಿತ್ತು. 97 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.

ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಮಧ್ಯಾಹ್ನ ಫಲಿತಾಂಶ ಪ್ರಕಟಿಸಲಾಗುವುದು. https://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ಗಮನಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular