HomeKarnatakaBIG NEWS: ನಾಪತ್ತೆಯಾಗಿದ್ದ SSLC ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ

BIG NEWS: ನಾಪತ್ತೆಯಾಗಿದ್ದ SSLC ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರು: ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯೋರ್ವ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕಮಗಳೂರು ಜಿಲ್ಲೆಯ ಕಳಸಾದಲ್ಲಿ ನಡೆದಿದೆ.

ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ದುರ್ದೈವಿ. ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಬೆಳಿಗ್ಗೆ ಶಾಲೆಗೆಂದು ಹೋದವನು ಮನೆಗೆ ವಾಪಾಸ್ ಆಗಿರಲಿಲ್ಲ. ಇದರಿಂದ ಗಾಬರಿಯಾದ ಪೋಷಕರು ಪೊಲಿಸ್ ಠಾಣೆಯಲ್ಲಿ ದೂರು ನೀಡಿದ್ದರು.

ನಾಲ್ಕು ದಿನಗಳ ಕಾಲ ಹುಡುಕಾಡಿದರೂ ವಿದ್ಯಾರ್ಥಿ ಸುಳಿವು ಸಿಕ್ಕಿರಲಿಲ್ಲ. ಇದೀಗ ಭದ್ರಾನದಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಹಾಸನ ಜಿಲ್ಲೆಯ ಬೇಲೂರು ಮೂಲದವನಾಗಿದ್ದು, ಕಳಸದಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದು, ವ್ಯಾಸಂಗ ಮಾಡುತ್ತಿದ್ದ. ವಿದ್ಯಾರ್ಥಿ ಸಾವಿಗೆ ಕಾರಣ ತಿಳಿದುಬಂದಿಲ್ಲ. ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular