ಹಾವೇರಿ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.
ರುದ್ರೇಶ ಗಂಜಿಗಟ್ಟಿ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮನೆಯಲ್ಲಿ ನೇಣು ಬಿಗಿದುಕೊಂಡು ರುದ್ರೇಶ್ ಗಂಜಿಗಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಚ್ಚು ಮೊಬೈಲ್ ಬಳಸಬೇಡ, ಈ ಸಲ ಬೋರ್ಡ್ ಎಕ್ಸಾಮ್ ಇದೆ. ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸು ಎಂದು ಪೋಷಕರು, ಕುಟುಂಬದವರು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ರುದ್ರೇಶ್ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.