HomeLatest Newsಹೆಚ್ಚಾಗಿ ಮೊಬೈಲ್ ನೋಡಬೇಡ, ಓದು ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಹೆಚ್ಚಾಗಿ ಮೊಬೈಲ್ ನೋಡಬೇಡ, ಓದು ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

ರುದ್ರೇಶ ಗಂಜಿಗಟ್ಟಿ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮನೆಯಲ್ಲಿ ನೇಣು ಬಿಗಿದುಕೊಂಡು ರುದ್ರೇಶ್ ಗಂಜಿಗಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಚ್ಚು ಮೊಬೈಲ್ ಬಳಸಬೇಡ, ಈ ಸಲ ಬೋರ್ಡ್ ಎಕ್ಸಾಮ್ ಇದೆ. ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸು ಎಂದು ಪೋಷಕರು, ಕುಟುಂಬದವರು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ರುದ್ರೇಶ್ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular