ಬೆಂಗಳೂರು: ಭಯ ರಹಿತವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಮೂಲಕ ಕೌನ್ಸೆಲಿಂಗ್ ನೀಡಲಿದೆ.
ಮಾರ್ಚ್ 10 ರಿಂದ ಮಧ್ಯಾಹ್ನ 2:30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಮಾ. 10ರಿಂದ 19ರ ವರೆಗೆ ಪ್ರತಿದಿನ ಮಧ್ಯಾಹ್ನ 2:30 ರಿಂದ ಸಂಜೆ 6.30ರವರೆಗೆ ಮಾರ್ಚ್ 16ರಂದು ಬೆಳಿಗ್ಗೆ 110 ರಿಂದ ಸಂಜೆ 5ರ ವರೆಗೆ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ.
ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಿಯಂತ್ರಣ ಕೊಠಡಿಯಾಗಿ, ಬೆಳಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಿದೆ.
080 23310075, 080 23310076 ಸಹಾಯವಾಣಿ ಸಂಖ್ಯೆಯಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಕರೆ ಮಾಡಿ ತಮ್ಮ ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.