HomeKarnatakaಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ಸಹಾಯವಾಣಿ

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ಸಹಾಯವಾಣಿ

ಬೆಂಗಳೂರು: ಭಯ ರಹಿತವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಮೂಲಕ ಕೌನ್ಸೆಲಿಂಗ್ ನೀಡಲಿದೆ.

ಮಾರ್ಚ್ 10 ರಿಂದ ಮಧ್ಯಾಹ್ನ 2:30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಮಾ. 10ರಿಂದ 19ರ ವರೆಗೆ ಪ್ರತಿದಿನ ಮಧ್ಯಾಹ್ನ 2:30 ರಿಂದ ಸಂಜೆ 6.30ರವರೆಗೆ ಮಾರ್ಚ್ 16ರಂದು ಬೆಳಿಗ್ಗೆ 110 ರಿಂದ ಸಂಜೆ 5ರ ವರೆಗೆ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ.

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಿಯಂತ್ರಣ ಕೊಠಡಿಯಾಗಿ, ಬೆಳಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

080 23310075, 080 23310076 ಸಹಾಯವಾಣಿ ಸಂಖ್ಯೆಯಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಕರೆ ಮಾಡಿ ತಮ್ಮ ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular