HomeKarnatakaBIG NEWS: ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾದ ವಿದ್ಯಾರ್ಥಿ

BIG NEWS: ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾದ ವಿದ್ಯಾರ್ಥಿ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.

ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ (16) ನಾಪತ್ತೆಯಾಗಿರುವ ವಿದ್ಯಾರ್ಥಿ. ಸುರೇಶ್ ಹಾಗೂ ರೂಪಾ ದಂಪತಿಯ ಮಗ ಚಂದನ್ ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಆತಂಕಗೊಂಡು ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ನಾಪತ್ತೆಯಾಗಿದ್ದಾನೆ. ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದಾನೆ. ಪೋಷಕರು ಮಗನಿಗಾಗಿ ಹುಡುಕಾಟ ನಡೆಸಿದ್ದು, ನೆಲಮಂಗಲ ಠಾಣೆಯಲ್ಲಿ ಪ್ರಕರ‍ಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular