ತುಮಕೂರು: ನೇಣು ಬಿಗಿದುಕೊಂಡು ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಪಾಪನಕೊಣ ಗ್ರಾಮದಲ್ಲಿ ನಿನ್ನೆ ಘಟನೆ ನಡೆದಿದೆ.
ಹರ್ಷ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ನೇಣು ಹಾಕಿಕೊಂಡು ಹರ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕ ಹರ್ಷ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಕ್ಕನಾಯಕನಹಳ್ಳಿ ತಾಂಡಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

