ಜೂನ್ 12 ರಿಂದ ‘SSLC’ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಜೂನ್ 12ರಿಂದ ಜೂ. 19ರವರೆಗೆ 2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ( SSLC Supplementary Exam) ನಡೆಯಲಿದ್ದು, ಈಗಾಗಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ.

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಲವು ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದ್ದು, ಕಡ್ಡಾಯವಾಗಿ  ಪಾಲಿಸಲು ತಿಳಿಸಿದೆ.

1) ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.

2) ಪರೀಕ್ಷಾ ದಿನಗಳಂದು ಯಾವುದೇ ಅಹಿತರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ  144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

3) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ನಿಷೇಧವಾಗಿದೆ.

4)  ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

5) ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ.

6) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

7) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ (examination centres)  ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್  ನಿಷೇಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತ  ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read