HomeKarnatakaSSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಪರೀಕ್ಷೆ-1, ಪರೀಕ್ಷೆ-2 ಯಾವಾಗ? ಇಲ್ಲಿದೆ ಡೇಟ್‌

SSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಪರೀಕ್ಷೆ-1, ಪರೀಕ್ಷೆ-2 ಯಾವಾಗ? ಇಲ್ಲಿದೆ ಡೇಟ್‌

ಬೆಂಗಳೂರು: 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯ ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಲಾಗಿದೆ.

ಮಾರ್ಚ್ 22ರಿಂದ SSLC ಪರೀಕ್ಷೆ-1 ಆರಂಭ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22ರಿಂದ ಆರಂಭವಾಗಿ ಏಪ್ರಿಲ್ 5ರಂದು ಮುಕ್ತಾಯಗೊಳ್ಳಲಿದೆ. ಪರೀಕ್ಷೆ-2 ಮೇ 24ರಿಂದ ಆರಂಭವಾಗಿ ಮೇ 31ರವರೆಗೆ ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

SSLC ಪರೀಕ್ಷೆ-1ರ ವಿಷಯವಾರು ವೇಳಾಪಟ್ಟಿ

ದಿನಾಂಕ ವಿಷಯ ಪರೀಕ್ಷಾ ಸಮಯ

ಮಾರ್ಚ್ 22, 2027 ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಮಾರ್ಚ್ 25, 2027 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಮಾರ್ಚ್ 27, 2027 ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ

ಮಾರ್ಚ್ 30, 2027 ಗಣಿತ, ಸಮಾಜಶಾಸ್ತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಏಪ್ರಿಲ್ 2, 2027 ತೃತೀಯ ಭಾಷೆ: ಹಿಂದಿ (NCERT), ಹಿಂದಿ, ಕನ್ನಡ (ಪುನರಾವರ್ತಿತರಿಗೆ), ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ

ಏಪ್ರಿಲ್ 3, 2027 ಜೆ.ಟಿ.ಎಸ್. ವಿಷಯಗಳು ಮತ್ತು ಅರ್ಥಶಾಸ್ತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಏಪ್ರಿಲ್ 5, 2027 ಸಮಾಜ ವಿಜ್ಞಾನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 22 ಕೊನೆಯ ದಿನ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮಂಡಳಿ 15 ದಿನಗಳ ಕಾಲಾವಕಾಶ ನೀಡಿದೆ. ವೇಳಾಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಅಥವಾ ತಕರಾರುಗಳಿದ್ದರೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಅಕ್ಟೋಬರ್ 22ರೊಳಗೆ ಸಲ್ಲಿಸಬಹುದು.ವೇಳಾಪಟ್ಟಿ ತಾತ್ಕಾಲಿಕವಾಗಿರುವುದರಿಂದ ವಿದ್ಯಾರ್ಥಿಗಳು ಅಂತಿಮ ವೇಳಾಪಟ್ಟಿಗಾಗಿ ಮಂಡಳಿಯ ಅಧಿಕೃತ ಪ್ರಕಟಣೆಗಳನ್ನು ಗಮನಿಸಬೇಕು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular