HomeKarnatakaಎಸ್.ಎಸ್.ಎಲ್.ಸಿ ಪರೀಕ್ಷೆಯ ತೃತೀಯ ಭಾಷೆಗೆ ಗ್ರೇಡ್ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಕರಡು ಅಧಿಸೂಚನೆ...

ಎಸ್.ಎಸ್.ಎಲ್.ಸಿ ಪರೀಕ್ಷೆಯ ತೃತೀಯ ಭಾಷೆಗೆ ಗ್ರೇಡ್ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳ ಬದಲಾಗಿ ಗ್ರೇಡ್ ನೀಡುವ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಪ್ರಕಟಿಸಿದೆ.

ಎಷ್ಟರವರೆಗಿನ ಅಂಕಕ್ಕೆ ಯಾವ ಗ್ರೇಡ್​​ ಎಂಬ ಮಾಹಿತಿ ನೀಡಲಾಗಿದ್ದು, ಹೊಸ ನಿಯಮದ ಅನ್ವಯ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಲಿದೆ. ಈ ನಿರ್ಧಾರದ ಬಗ್ಗೆ ಸಾರ್ವಜನಿಕರು 7 ದಿನಗಳೊಳಗೆ ಆಕ್ಷೇಪಣೆ/ಸಲಹೆ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಡು ಅಧಿಸೂಚನೆಯ ಪ್ರಕಾರ, ತೃತೀಯ ಭಾಷೆ ಮತ್ತು ಎನ್‌ಎಸ್‌ಕ್ಯೂಎಫ್ (ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು) ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದಲ್ಲಿ A, B ಮತ್ತು C ಗ್ರೇಡ್‌ಗಳನ್ನು ನೀಡಲಾಗುತ್ತದೆ. ಅಧಿಸೂಚನೆಯಂತೆ, 80ರಿಂದ 100 ಅಂಕ ಗಳಿಸಿದವರಿಗೆ A ಗ್ರೇಡ್, 50ರಿಂದ 79 ಅಂಕಗಳಿಗೆ B ಗ್ರೇಡ್ ಮತ್ತು 49ರವರೆಗೆ ಅಂಕ ಪಡೆದವರಿಗೆ C ಗ್ರೇಡ್ ಸಿಗಲಿದೆ. ಹೀಗಿದ್ದರೂ ಈ ಗ್ರೇಡ್‌ಗಳು ವಿದ್ಯಾರ್ಥಿಗಳ ಪಾಸ್ ಅಥವಾ ಫೇಲ್ ಬಗ್ಗೆ ಸೂಚಿಸುವುದಿಲ್ಲ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದ್ದು, ಫಲಿತಾಂಶವನ್ನು ಏಪ್ರಿಲ್ 24ರಂದು ಪ್ರಕಟಿಸುವ ಸಾಧ್ಯತೆ ಇದೆ.

ಕರಡು ಅಧಿಸೂಚನೆ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಆಹ್ವಾನಿಸಲಾಗಿದೆ. ತಮ್ಮ ಆಕ್ಷೇಪಣೆಗಳನ್ನು ಏಳು ದಿನಗಳೊಳಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಬಿಗ್​​ ಶಾಕ್​​ ಕೊಟ್ಟಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಅರ್ಜಿದಾರರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಅಲ್ಲದೇ ಪಿಐಎಲ್ ವಜಾಗೊಳಿಸಿ ಆದೇಶಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular