HomeKarnatakaಎಸ್.ಎಸ್.ಎಲ್.ಸಿ ಪರೀಕ್ಷೆಗೆ ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡಲು ನಿರ್ಧಾರ: ಮರುಪರಿಶೀಲಿಸುವಂತೆ ಸಿಎಸ್ ಗೆ...

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡಲು ನಿರ್ಧಾರ: ಮರುಪರಿಶೀಲಿಸುವಂತೆ ಸಿಎಸ್ ಗೆ ಪತ್ರ ಬರೆದ ರಾಜ್ಯಪಾಲರು

ಬೆಂಗಳೂರು: ಎಸ್.ಎಸ್.ಎಲ್.ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ರಾಜ್ಯ ಸರ್ಕಾರ ಗ್ರೇಡ್​ ನೀಡಲು ನಿರ್ಧರಿಸಿದ್ದು,. ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ.

ಈ ವಿಚಾಅರವಾಗಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಪತ್ರ​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಗ್ರೇಡ್‌ ನೀಡಿದರೆ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆ ಮಾಡಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ನಿರ್ಧಾರ ವಿದ್ಯಾರ್ಥಿಗಳು ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು. ಶಿಕ್ಷಣದ ಮೇಲೆ ಬೀರುವ ಪರಿಣಾಮದ ಬಗ್ಗೆ ಪೋಷಕರಿಗೂ ಆತಂಕ ಇದ್ದು, ರಾಜ್ಯಪಾಲರು ಈ ವಿಷಯವನ್ನು ಗಮನಿಸಿದ್ದಾರೆ. ಹೀಗಾಗಿ ಶೈಕ್ಷಣಿಕ, ಆಡಳಿತಾತ್ಮಕ ಅಂಶ ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಶೈಕ್ಷಣಿಕ ಉದ್ದೇಶಗಳಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಸ್​ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಬರೆದಿರುವ ಪತ್ರದಲ್ಲಿ ಸೂಚಿಸಲಾಗಿದೆ.

ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಆ ಬೆನ್ನಲ್ಲೇ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಿ, ತೃತೀಯ ಭಾಷೆಯ ಅಂಕಕ್ಕೆ ಸರ್ಕಾರ ಕೊಕ್​ ನೀಡಿತ್ತು. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗುವುದಿಲ್ಲ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸರ್ಕಾರ ಈ ನಿರ್ಧಾರದ ಬಗ್ಗೆ ಹೈಕೋರ್ಟ್​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿದೆ. ಈ ನಡುವೆ ರಾಜ್ಯಪಾಲರು ಕೂಡ ಪತ್ರ ಬರೆದಿದಿದ್ದು, ಮಹತ್ವ ಪಡೆದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular