HomeIndiaಐತಿಹಾಸಿಕ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಯುವಕ ಆತ್ಮಹತ್ಯೆ

ಐತಿಹಾಸಿಕ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಯುವಕ ಆತ್ಮಹತ್ಯೆ

ಕೊಲ್ಕತ್ತಾ: ಕೊಲ್ಕತ್ತಾದ ಇತಿಹಾಸಿಕ ಈಡನ್ ಗಾರ್ಡನ್ಸ್ ಸ್ಟೇಡಿಯಂನ ಗ್ಯಾಲರಿ ಒಂದರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವ್ಯಕ್ತಿಯನ್ನು ಕ್ರೀಡಾಂಗಣದ ಸಿಬ್ಬಂದಿಯ ಪುತ್ರ ಧನಂಜಯ ಬಾರಿಕ್(21) ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಧನಂಜಯ ಸೋಮವಾರ ಕ್ರೀಡಾಂಗಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತ ಕ್ರೀಡಾಂಗಣದಲ್ಲೇ ಕೆಲಸ ಪಡೆಯಲು ಪ್ರಯತ್ನಿಸುತ್ತಿದ್ದ. ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular