ಪಿಯುಸಿ ಓದಿದವರಿಗೆ ಗುಡ್ ನ್ಯೂಸ್: ಸಿಬ್ಬಂದಿ ನೇಮಕಾತಿ ಆಯೋಗದಿಂದ 3131 ಹುದ್ದೆಗಳಿಗೆ ಅರ್ಜಿ

ಸಿಬ್ಬಂದಿ ನೇಮಕಾತಿ ಆಯೋಗ ಭಾರತ ಸರ್ಕಾರದಿಂದ LDC/JSA/DEO ಮುಂತಾದ 3131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪಿಯುಸಿ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜು.18 ರೊಳಗೆ ಸಿಬ್ಬಂದಿ ನೇಮಕಾತಿ ಆಯೋಗದ https://ssc.gov.in  ವೆಬ್‌ಸೈಟ್‌ನಲ್ಲಿ ಖಡ್ಡಾಯವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷಗಳಾಗಿರಬೇಕು. ದಿನಾಂಕ: 01-01-2026 ಕ್ಕೆ ಗರಿಷ್ಠ ವಯೋಮಿತಿ 27 ವರ್ಷ ಮೀರಿರಬಾರದು. ಮಹಿಳೆಯರಿಗೆ ಹಾಗೂ (SC/ST/PWBD/Eligible Ex Serviceman) ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ. ಉಳಿದ ಅಭ್ಯರ್ಥಿಗಳಿಗೆ 100 ಅರ್ಜಿ ಶುಲ್ಕವಿರುತ್ತದೆ.

ಪರೀಕ್ಷಾ ದಿನಾಂಕ: ಸಿಬ್ಬಂದಿ ನೇಮಕಾತಿ ಆಯೋಗ ಆದೇಶದಂತೆ 08-09-2025 ರಿಂದ 18-09-2025 ರವರೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ: ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ರವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08172-296374 ರಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read