ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದಿರಂತಕ್ಕೆ ಸಂಬಂಧಿಸಿದಂತೆ ನ್ಯಾ.ಡಿ.ಕುನ್ಹಾ ಆಯೋಗ ಈಗಾಗಲೇ ವರದಿ ನೀಡಿದ್ದು, ಪೊಲೀಸರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ನ್ಯಾ. ಕುನ್ಹಾ ಆಯೋಗದ ವರದಿ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೊಲೀಸರ ಅಮಾನತು ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಅಲ್ಲದೇ ಆರ್ ಸಿಬಿ ಹಾಗೂ ಕೆ ಎಸ್ ಸಿಎ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.