HomeLatest NewsBIG NEWS: ಕಾಲ್ತುಳಿತ ದುರಂತ: ಸರ್ಕಾರವನ್ನು ಅಮಾನತಿನಲ್ಲಿಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ ಸಿಟಿಜನ್ ರೈಟ್ಸ್ ಫೌಂಡೇಷನ್

BIG NEWS: ಕಾಲ್ತುಳಿತ ದುರಂತ: ಸರ್ಕಾರವನ್ನು ಅಮಾನತಿನಲ್ಲಿಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ ಸಿಟಿಜನ್ ರೈಟ್ಸ್ ಫೌಂಡೇಷನ್

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ನಾಗರಿಕ ಹಕ್ಕುಗಳ ಸಂಸ್ಥೆ ರಾಜ್ಯಪಾಲರಿಗೆ ಪತ್ರ ಬರೆದಿದೆ. ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ ಮಾಡಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಸಿಟಿಜನ್ ರೈಟ್ಸ್ ಫೌಂಡೇಷನ್, ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ಪೂರ್ಣವಾಗುವವರೆಗೂ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸಿರುವ ಅಧಿಕಾರಿಗಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಘಟನೆ ಬಗ್ಗೆ ಸೂಕ್ತ ತನಿಖೆ ಆಗಬೇಕು. ತನಿಖೆ ಮುಗಿಯುವವರೆಗೂ ಸರ್ಕಾರವನ್ನು ಅಮಾನತಿನಲ್ಲಿಡಬೇಕು ಎಂದು ಒತ್ತಾಯಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular