HomeLatest NewsBREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: FIR ರದ್ದು ಕೋರಿ ಹೈಕೋರ್ಟ್ ಮೊರೆ...

BREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: FIR ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಡಿಎನ್ ಎ ಕಂಪನಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದು ಕೋರಿ ಡಿಎನ್ ಎ ಕಂಪನಿ ಹೈಕೋರ್ಟ್ ಮೊರೆ ಹೋಗಿದೆ.

ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರ್ ಸಿಬಿ, ಕೆ.ಎಸ್.ಸಿ.ಎ ಹಾಗೂ ಡಿಎನ್ ಎ ಕಂಪನಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆ.ಎಸ್.ಸಿ.ಎ ಹೈಕೋರ್ಟ್ ಮೊರೆ ಹೋಗಿದೆ. ಇದೀಗ ಡಿಎನ್ ಎ ಕಂಪನಿ ಕೂಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ತನ್ನ ವಿರುದ್ಧದ ಎಫ್ ಐ ಆರ್ ರದ್ದು ಮಾಡುವಂತೆ ಮನವಿ ಸಲ್ಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಆರ್ ಸಿಬಿ ವಿಜಯೋತ್ಸವದ ವೇಳೆ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರು. ಹಲವರು ಗಾಯಗೊಂಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular