HomeLatest NewsBIG NEWS: ಕಾಲ್ತುಳಿತ ದುರಂತ ಪ್ರಕರಣ: ಅಮೈಕಸ್ ಕ್ಯೂರಿ ನೇಮಿಸಿದ ಹೈಕೋರ್ಟ್

BIG NEWS: ಕಾಲ್ತುಳಿತ ದುರಂತ ಪ್ರಕರಣ: ಅಮೈಕಸ್ ಕ್ಯೂರಿ ನೇಮಿಸಿದ ಹೈಕೋರ್ಟ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ ಇಂದು ಅರ್ಜಿ ವಿಚಾರಣೆ ನಡೆಸಿದೆ.

ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ವಿಭಾಗೀಯ ಪೀಠ ಅಮೈಕಸ್ ಕ್ಯೂರಿಯನ್ನು ನೇಮಕ ಮಾಡಿದೆ. ಅಂದರೆ ನ್ಯಾಯಾಲಯಕ್ಕೆ ನೆರವಾಗುವ ವಕೀಲರನ್ನು ನೇಮಕ ಮಾಡಿದೆ. ಅಮೈಕಸ್ ಕ್ಯೂರಿಯಾಗಿ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕ ಮಾಡಿದೆ.

ಪಿಐ ಎಲ್ ಹಾಗೂ ಪ್ರಕರಣದ ಇತರೆ ದಾಖಲೆಗಳನ್ನು ಎಸ್.ಸುಶೀಲಾ ಅವರಿಗೆ ನೀಡಲು ನ್ಯಾಯಪೀಠ ಸೂಚಿಸಿದೆ. ಪ್ರಕರಣದ ಅರ್ಜಿ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular