HomeLatest NewsBREAKING NEWS: ಬಂಧನ ಭೀತಿ: ಹೈಕೋರ್ಟ್ ಮೊರೆಹೋದ KSCA ಪದಾಧಿಕಾರಿಗಳು: ರಿಟ್ ಅರ್ಜಿ ಸಲ್ಲಿಕೆ

BREAKING NEWS: ಬಂಧನ ಭೀತಿ: ಹೈಕೋರ್ಟ್ ಮೊರೆಹೋದ KSCA ಪದಾಧಿಕಾರಿಗಳು: ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಕೆ.ಎಸ್.ಸಿ.ಎ ಪದಾಧಿಕಾರಿಗಳು ಹೈಕೋರ್ಟ್ ಮೊರೆಹೋಗಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಕೆ ಎಸ್ ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಬಂಧನ ಭೀತಿಯಲ್ಲಿದ್ದಾರೆ. ಎಫ್ಐಆರ್ ರದ್ದು ಕೋರಿ ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೆ.ಎಸ್.ಸಿ.ಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕೆ ಎಸ್ ಸಿಎ ಕಾರ್ಯದರ್ಶಿ ಶಂಕರ್, ಖಜಾಂಚಿ ಜಯರಾಮ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular