HomeLatest NewsKSCA ತೆರವುಗೊಂಡ ಸ್ಥಾನಕ್ಕೆ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ತಾತ್ಕಾಲಿಕ ನೇಮಕ

KSCA ತೆರವುಗೊಂಡ ಸ್ಥಾನಕ್ಕೆ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ತಾತ್ಕಾಲಿಕ ನೇಮಕ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಎಸ್ ಸಿಎ ಕಾರ್ಯದರ್ಶಿ ಸ್ಥಾನಕ್ಕೆ ಎ.ಶಂಕರ್ ಹಾಗೂ ಖಜಾಂಚಿ ಸ್ಥಾನಕ್ಕೆ ಜೈರಾಮ್ ರಾಜೀನಾಮೆ ನೀಡಿದ್ದಾರೆ.

ಪದಾಧಿಕಾರಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ರಿಲೀಫ್ ಕೊಟ್ಟ ಬಳಿಕ ಅಧ್ಯಕ್ಷ ಬ್ರಿಜೇಶ್ ಪಟೇಲ್ ಸಭೆ ನಡೆಸಿ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಎ.ಶಂಕರ್ ಹಾಗೂ ಜೈರಾಮ್ ಇಬ್ಬರೂ ರಾಜೀನಾಮೆ ನೀಡಿದ್ದಾರೆ.

ಸದ್ಯ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ತಾತ್ಕಾಲಿಕವಾಗಿ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ಅವರನ್ನು ನೇಮಕ ಮಾಡಲಾಗಿದೆ. ಇಂದು ಸಂಜೆ ಕೆ ಎಸ್ ಸಿಎ ಪದಾಧಿಕಾರಿಗಳ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಕೆ ಎಸ್ ಸಿಎ ಚುನಾವಣೆಯ ಬಗ್ಗೆಯೂ ಮಹತ್ವದ ಚರ್ಚೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular