HomeLatest NewsBIG NEWS: ಕಾಲ್ತುಳಿತ ಪ್ರಕರಣ: ಜವಾಬ್ದಾರಿ ನಿರ್ವಹಿಸದವರ ವಿರುದ್ಧ ಕ್ರಮ ಕೈಗೊಳ್ಳಳಾಗಿದೆ: ಸಿಎಂ ಸಿದ್ದರಾಮಯ್ಯ

BIG NEWS: ಕಾಲ್ತುಳಿತ ಪ್ರಕರಣ: ಜವಾಬ್ದಾರಿ ನಿರ್ವಹಿಸದವರ ವಿರುದ್ಧ ಕ್ರಮ ಕೈಗೊಳ್ಳಳಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷ್ನರ್ ಸೇರಿ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಕ್ರಮಕ್ಕೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಪ್ರಕರಣದ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಯಾವುದೇ ರಾಜಕೀಯ ಮಾಡುವುದಿಲ್ಲ ಎಂದರು.

ಪ್ರಕರಣದಲ್ಲಿ ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಬಗ್ಗೆ ತನಿಖೆಗೂ ಆದೇಶಿಸಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular