HomeLatest NewsBIG NEWS: ಕಾಲ್ತುಳಿತ ಪ್ರಕರಣ: ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ:...

BIG NEWS: ಕಾಲ್ತುಳಿತ ಪ್ರಕರಣ: ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಏಕ ವ್ಯಕ್ತಿ ಆಯೋಗವು ಎರಡು ಸಂಪುಟಗಳಲ್ಲಿ ವರದಿಯಲ್ಲಿ ಸಲ್ಲಿಸಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ ನಿರ್ಧಾರ ಮಾಡಲಿದೆ ಎಂದರು. ವರದಿಯನ್ನು ನಾವು ಸಂಪೂರ್ಣ ಒಡಿಲ್ಲ. ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular