HomeLatest NewsBREAKING NEWS: ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

BREAKING NEWS: ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಕಾಲ್ತುಳಿತ ದುರಂತ ಪ್ರಕರಣ ಸಂಬಂಧ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅರ್ಜಿ ಕೈಗೆತ್ತಿಕೊಂಡ ನ್ಯಾಯಮಂಡಳಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಹೆಚ್ಚುವರಿ ಎಜಿ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಿಎಟಿ ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular