BIG NEWS: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ಸೇರಿದಂತೆ ಹಲವರ ವಿರುದ್ಧ ದೂರು: ಮ್ಯಾಚ್ ಫಿಕ್ಸಿಂಗ್ ಬಾಂಬ್ ಸಿಡಿಸಿದ ಟಿ.ಜೆ. ಅಬ್ರಾಹಂ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸತ್ಯವತಿ, ಆರ್ ಸಿಬಿ, ಕೆ ಎಸ್ ಸಿ ಎ, ಪೊಲೀಸ್ ಅಧಿಕಾರಿಯಾಗಿದ್ದ ಬಿ.ದಯಾನಂದ್, ವಿಕಾಸ್ ಕುಮಾರ್, ಶೇಖರ್ ತೆಕ್ಕಣ್ಣವರ್, ವಿಧಾನಸೌಧ ಡಿಸಿಪಿ ಕರಿಬಸನಗೌಡ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಿಸಿದ್ದಾರೆ.

ಅಲ್ಲದೇ ಮ್ಯಾಚ್ ಗೂ ಮುನ್ನ ಆರ್ ಸಿಬಿ ವಿನ್ನಾಗುತ್ತೆ ಎಂದು ಹೇಗೆ ಗೊತ್ತಾಯ್ತು? ಎಂದು ಕೇಳುವ ಮೂಲಕ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದಾರೆ.

ಆರ್ ಸಿಬಿ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಕನೆಕ್ಷನ್ ಏನು? ಡಿ.ಕೆ.ಶಿವಕುಮಾರ್ ಗೂ ಕ್ರಿಕೆಟ್ ಗೂ ಏನು ಸಂಬಂಧ? ಆರ್ ಸಿಬಿನ ಕೊಂಡುಕೊಳ್ಳಬೇಕು ಅಂತಿದ್ರು. 8,600 ಕೋಟಿ ರೂಪಾಯಿಗೆ ಪ್ಲಾನ್ ಮಾಡಿದ್ದರು. 17,000 ಕೋಟಿ ಇದ್ರೆ ಮುಂದುವರಿಯಬಹುದು ಎಂಬುದು ಗೊತ್ತಾಗುತ್ತೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read