HomeLatest NewsBREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ಬಂಧಿತರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

BREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ಬಂಧಿತರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಗಂಣದಲ್ಲಿ ಜೂನ್ 4ರಂದು ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಆರ್ ಸಿಬಿಯ ನಾಲ್ವರು ಸಿಬ್ಬಂದಿಗಳನ್ನು ಬಂಧಿಸಲಾಗಿದ್ದು, ಬಂಧಿತರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನಿಖಿಲ್ ಸೋಸಲೆ ಸೇರಿದಂತೆ ಬಂಧಿತರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular