HomeLatest NewsSHOCKING : ಬೆಂಗಳೂರಿನ 'ಚಿನ್ನಸ್ವಾಮಿ ಸ್ಟೇಡಿಯಂ'ನಲ್ಲಿ ಕಾಲ್ತುಳಿತ ದುರಂತ : ಭಯಾನಕ ವೀಡಿಯೋ ವೈರಲ್ |WATCH...

SHOCKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : ಭಯಾನಕ ವೀಡಿಯೋ ವೈರಲ್ |WATCH VIDEO

ಬೆಂಗಳೂರು :   ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ 11 ಮಂದಿ ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರವಾಗಿ ಗಾಯಗೊಂಡರು. ಸೋಶಿಯಲ್ ಮೀಡಿಯಾದಲ್ಲಿ ಕಾಲ್ತುಳಿತ ದುರಂತದ ಭಯಾನಕ ವೀಡಿಯೋಗಳು ವೈರಲ್ ಆಗಿದೆ. ವೀಡಿಯೋಗಳನ್ನು ನೋಡಿದರೆ ಮೈ ಜುಂ ಎನಿಸುತ್ತದೆ.

ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ಪರಿಹಾರ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ. •ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದೇನೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮವರನ್ನು ಕಳೆದುಕೊಂಡವರನ್ನು ಸಂತೈಸಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಈ ಘಟನೆಯ ಬಗ್ಗೆ ನಮಗೆ ಮರುಕವಿದೆ. •ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. •ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/karnatakaportf/status/1930262518481727641

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular