ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಕಾಲ್ತುಳಿತ ದುರಂತ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಇಂದಿನ ಎಲ್ಲಾ ಕಾರ್ಯಕ್ರಮ ರದ್ದು ಮಾಡಲಾಗಿದೆ. ಗುರುವಾರದ ಸಚಿವ ಸಂಪುಟ ಸಭೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

