HomeKarnatakaಸುಮಲತಾ ಅಂಬರೀಶ್ ಪರವಾಗಿ ದರ್ಶನ್, ಯಶ್ ಜತೆ ನಾಲ್ವರು ಸ್ಟಾರ್ ನಟರ ಪ್ರಚಾರ

ಸುಮಲತಾ ಅಂಬರೀಶ್ ಪರವಾಗಿ ದರ್ಶನ್, ಯಶ್ ಜತೆ ನಾಲ್ವರು ಸ್ಟಾರ್ ನಟರ ಪ್ರಚಾರ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಅವರ ಪರವಾಗಿ ಜೋಡೆತ್ತುಗಳ ಜೊತೆಗೆ ಇನ್ನೂ ನಾಲ್ವರು ಸ್ಟಾರ್ ನಟರು ಪ್ರಚಾರ ನಡೆಸಲಿದ್ದಾರೆ.

ನಟ ಹಾಗೂ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಂಬರೀಶ್ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಭಿಷೇಕ್, ಲೋಕಸಭೆ ಚುನಾವಣೆಯಲ್ಲಿ ಅಂಬರೀಶ್ ಅಭಿಮಾನಿಗಳು ಒಗ್ಗಟ್ಟಾಗಿ ತಾಯಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಅಮ್ಮನ ಪರವಾಗಿ ನಟರಾದ ದರ್ಶನ್, ಯಶ್ ಪ್ರಚಾರದಲ್ಲಿ ಭಾಗಿಯಾಗಿ ಗೆಲುವಿಗೆ ಸಹಕಾರ ನೀಡಿದ್ದರು. ಈ ಚುನಾವಣೆಯಲ್ಲಿ ಜೋಡೆತ್ತುಗಳ ಜೊತೆಗೆ ಕನ್ನಡ ಚಿತ್ರರಂಗದ ಇನ್ನೂ ನಾಲ್ವರು ಸ್ಟಾರ್ ನಟರು ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular