BREAKING : ತಾರಕಕ್ಕೇರಿದ ‘ಹನುಮಾನ್ ಚಾಲೀಸ್’ ಪ್ರತಿಭಟನೆ ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನ ನಗರತ್ ಪೇಟೆಯಲ್ಲಿ ಮೊಬೈಲ್ ಶಾಪ್ ನಲ್ಲಿ ‘ಹನುಮಾನ್ ಚಾಲೀಸ್’ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.

ಮಾಜಿ ಸಚಿವ ಸುರೇಶ್ ಕುಮಾರ್ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಸಾಥ್ ನೀಡಿದರು. ಪ್ರತಿಭಟನೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ. ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೇರಳದಿಂದ ಬಂದು ಆಸಿಡ್ ಹಾಕುತ್ತಾರೆ, ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆ, ಇನ್ಯಾರೋ ಬರ್ತಾರೆ ಆಸಿಡ್ ಹಾಕುತ್ತಾರೆ. ರಾಜ್ಯದಲ್ಲಿ ಇಷ್ಟೆಲ್ಲಾ ದೌರ್ಜನ್ಯ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ, ಕೂಡಲೇ  ಗೃಹ ಸಚಿವ ಪರಮೇಶ್ವರ್   ರಾಜೀನಾಮೆ ನೀಡಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read