HomeKarnatakaಮತ್ತೊಂದು ʼಅಕ್ಕ ಕೆಫೆʼ ಆರಂಭ; ವಾರವಿಡಿ ಸಿಗಲಿದೆ ಆರೋಗ್ಯಕರ ಆಹಾರ

ಮತ್ತೊಂದು ʼಅಕ್ಕ ಕೆಫೆʼ ಆರಂಭ; ವಾರವಿಡಿ ಸಿಗಲಿದೆ ಆರೋಗ್ಯಕರ ಆಹಾರ

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಪ್ರಾರಂಭಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2 ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲಾಗುವುದು ಎಂದರು.

ಹಾಗೇಯೇ ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.

ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ. ಸರ್ಕಾರ ಬಜೆಟ್​​ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular